Sunday, 23 April 2017

Belli Kaalungura Song Lyrics

Belli Kaalungura Song Lyrics

ಚಿತ್ರ: ಬೆಳ್ಳಿ ಕಾಲುಂಗುರ
ಹಾಡಿದವರು: ಎಸ್ ಜಾನಕಿ, ??
ನಟರು: ಮಾಲಾಶ್ರಿ, ಸುನಿಲ್, ತಾರ

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಓ.....
ಲಾಲಾ.....
ಈ ಮಿಂಚುಗಳಲ್ಲೇ ಸಾರವಿದೆ
ಸಾರದಲ್ಲೇ ಸಂಸಾರವಿದೆ
ಅಂಗುಲಿಯಲ್ಲೇ ಮಂಗಳದ ಬಂಧನವಾಗಿದೆ ಬಂಧನವಾಗಿದೆ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬಾಳ ಕಡಲಲಿ ಪ್ರೇಮ ನದಿಗಳ ಸಂಧಿ ಸಮಯದಲಿ
ಮಿಂಚುವ ಮಿನುಗುವ ಸಾಕ್ಷಿ ಈ ಕಾಲುಂಗುರ
ನಾದಗಡಲಲಿ ವೇದ ಘೋಷದ ಸಪ್ತಪದಿಗಳಲಿ
ಬದುಕಿನ ಬಂಡಿಗೆ ಸಾರಥಿ ಕಾಲುಂಗುರ
ಶುಕವ ತರುವ ಸತಿ ಸುಖವ ಕೊಡುವ
ಮನ ಮನೆಯ ನೆಲದಲಿ ಗುನುಗುವ ಒಡವೆಯೋ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಆದಿ ಕಾಲದ ವೇದ ಮೂಲದ ಸತಿಯ ಆಭರಣ
ಚೆಲುವಿಗೆ ಒಲವಿಗೆ ಗೌರವ ಕಾಲುಂಗುರ
ಐದು ಮುತ್ತುಗಳಾರು ಮುಡಿವಳೋ ಅವಳೆ ಮುತ್ತೈದೆ
ಸಿಂಧೂರ ಮಾಂಗಲ್ಯ ಮೂಗುತಿ ಓಲೆ ಕಾಲುಂಗುರ
ಹೃದಯ ತೆರೆದು ಉಸಿರೊಡೆಯ ತರದು
ಗಂಡು ಹೆಣ್ಣಿಗೆ ನೀಡುವ ಆಣೆಯ ಉಡುಗೊರೆ
ಬೆಳ್ಳಿ ಕಾಲುಂಗುರ.......

No comments:

Post a Comment