Showing posts with label Bhagyada Laxmi Baaramma. Show all posts
Showing posts with label Bhagyada Laxmi Baaramma. Show all posts

Monday, 18 December 2017

Bhagyada Laxmi Baaramma Song Lyrics

Bhagyada Laxmi Baaramma Song Lyrics


ಭಾಗ್ಯದ ಲಕ್ಷ್ಮೀ ಬಾರಮ್ಮ
ಭಾಗ್ಯದ ಲಕ್ಷ್ಮೀ ಬಾರಮ್ಮ ನಮ್ಮಮ್ಮ ನೀ
ಸೌಭಾಗ್ಯದ ಲಕ್ಷ್ಮೀ ಬಾರಮ್ಮ ।। ಪಲ್ಲವಿ ।।

ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ ।। ೧ ।।

ಕನಕವೃಷ್ಟಿಯ ಕರೆಯುತ ಬಾರೆ
ಮನಕೆ ಮಾನವ ಸಿದ್ಧಿಯ ತೋರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ ।। ೨ ।।

ಅತ್ತಿತ್ತಗಲದೆ ಭಕ್ತರ ಮನೆಯಲಿ
ನಿತ್ಯ ಮಹೋತ್ಸವ ನಿತ್ಯ ಸುಮಂಗಲಿ
ಸತ್ಯವ ತೋರುವ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿ ಬೊಂಬೆ ।। ೩ ।।

ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ ।। ೪ ।।

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆವುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ⁠⁠ ।। ೫ ।।

ಸಾಹಿತ್ಯ: ಪುರಂದರ ದಾಸ